Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:25 - ಪರಿಶುದ್ದ ಬೈಬಲ್‌

25 ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ಆ ದೇಶದ ವಿಷಯವಾಗಿ ತಿಳಿಸಿದರು. ‘ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಲ್ಲಿನ ಹಣ್ಣುಹಂಪಲುಗಳಲ್ಲಿ ಕೆಲವನ್ನು ತಂದು ತೋರಿಸಿದರು; ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಆ ನಾಡು ಒಳ್ಳೆಯ ನಾಡೆಂದು ನಮಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶವೆಂದು ನಮಗೆ ವರ್ತಮಾನ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತೆಗೆದುಕೊಂಡು, ನಮ್ಮ ಬಳಿಗೆ ತಂದು ತೋರಿಸಿ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶವು ಒಳ್ಳೆಯದು,” ಎಂದು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:25
6 ತಿಳಿವುಗಳ ಹೋಲಿಕೆ  

ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)


ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.


ಇವರಿಬ್ಬರು ಇಸ್ರೇಲರೆಲ್ಲರಿಗೆ, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು,


ಅವರು ಹೊರಟುಹೋಗಿ ಬೆಟ್ಟಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು.


“ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು