ಧರ್ಮೋಪದೇಶಕಾಂಡ 1:27 - ಪರಿಶುದ್ದ ಬೈಬಲ್27 ನಿಮ್ಮನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗೊಣಗುಟ್ಟಿದಿರಿ, ‘ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಿಮ್ಮ ನಿಮ್ಮ ಡೇರೆಗಳಲ್ಲಿ ಗೊಣಗುಟ್ಟಿದಿರಿ; ‘ಸರ್ವೇಶ್ವರ ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಅಮೋರಿಯರ ಕೈಗೆ ಒಪ್ಪಿಸಿ ಸಂಹರಿಸಬೇಕೆಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನೀವು ನಿಮ್ಮ ಗುಡಾರಗಳಲ್ಲಿ ಗೊಣಗುಟ್ಟಿ, “ಯೆಹೋವ ದೇವರು ನಮ್ಮನ್ನು ಹಗೆ ಮಾಡಿದ್ದರಿಂದ, ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ, ನಮ್ಮನ್ನು ನಾಶಮಾಡುವುದಕ್ಕೆ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.