Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:32 - ಪರಿಶುದ್ದ ಬೈಬಲ್‌

32 “ಆದರೂ ನೀವು ಇನ್ನೂ ನಿಮ್ಮ ದೇವರಾದ ಯೆಹೋವನ ಮೇಲೆ ಭರವಸೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಆದರೂ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ಇನ್ನೂ ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:32
9 ತಿಳಿವುಗಳ ಹೋಲಿಕೆ  

ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.


ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ.


ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.


“ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು