Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:37 - ಪರಿಶುದ್ದ ಬೈಬಲ್‌

37 “ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದು ಮಾತ್ರವಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿ - ನೀನೂ ಆ ದೇಶಕ್ಕೆ ಸೇರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:37
12 ತಿಳಿವುಗಳ ಹೋಲಿಕೆ  

“ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.


ಆದರೆ ಯೆಹೋವನು ಮೋಶೆ ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದದ್ದರಿಂದ ಈ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


ನೀನು ಪಿಸ್ಗಾ ಬೆಟ್ಟವನ್ನು ಹತ್ತಿ ಉತ್ತರ, ಪಶ್ಚಿಮ, ಪೂರ್ವ, ದಕ್ಷಿಣ ದಿಕ್ಕುಗಳ ಕಡೆಗೆ ನೋಡು ಮತ್ತು ಆನಂದಿಸು. ಆದರೆ ನೀನು ಜೋರ್ಡನ್ ನದಿ ದಾಟಿ ಆ ಪ್ರದೇಶಗಳನ್ನು ಪ್ರವೇಶಿಸುವುದಿಲ್ಲ.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ಆದ್ದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡುವೆ, ಆದರೆ ಅದನ್ನು ಪ್ರವೇಶಿಸುವುದಿಲ್ಲ” ಎಂದು ಹೇಳಿದನು.


ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.


ಆದ್ದರಿಂದ ನಾನು ಇದೇ ದೇಶದಲ್ಲಿ ಸಾಯುವೆನು. ಆದರೆ ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ಆ ಒಳ್ಳೆಯ ದೇಶವನ್ನು ವಶಪಡಿಸಿಕೊಂಡು ಅಲ್ಲಿ ವಾಸಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು