ಧರ್ಮೋಪದೇಶಕಾಂಡ 1:38 - ಪರಿಶುದ್ದ ಬೈಬಲ್38 ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.