Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:1 - ಪರಿಶುದ್ದ ಬೈಬಲ್‌

1 “ಆಗ ಯೆಹೋವನು ನನಗೆ, ‘ಮೊದಲಿನ ಎರಡು ಕಲ್ಲಿನ ಹಲಗೆಗಳಂತೆಯೇ ಎರಡು ಕಲ್ಲಿನ ಹಲಗೆಗಳನ್ನು ಮಾಡು. ಆಮೇಲೆ ಬೆಟ್ಟದ ಮೇಲೆ ನನ್ನ ಬಳಿಗೆ ಬಾ. ಅಲ್ಲದೆ ಒಂದು ಮರದ ಪೆಟ್ಟಿಗೆಯನ್ನೂ ತಯಾರು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆ ಕಾಲದಲ್ಲಿ ಸರ್ವೇಶ್ವರ ನನಗೆ, ‘ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಯೆಹೋವನು ನನಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ ಯೆಹೋವ ದೇವರು ನನಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ನೀನು ಕೆತ್ತಿಕೊಂಡು, ಬೆಟ್ಟವನ್ನೇರಿ ನನ್ನ ಬಳಿಗೆ ಬಾ. ಒಂದು ಮರದ ಮಂಜೂಷವನ್ನು ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:1
5 ತಿಳಿವುಗಳ ಹೋಲಿಕೆ  

ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಆದ್ದರಿಂದ ಮೋಶೆ ಮೊದಲಿನ ಎರಡು ಕಲ್ಲುಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡಿದನು. ಬಳಿಕ ಮರುದಿನ ಮುಂಜಾನೆ ಬೇಗನೆ ಸೀನಾಯಿ ಬೆಟ್ಟವನ್ನೇರಿದನು. ಯೆಹೋವನು ಆಜ್ಞಾಪಿಸಿದಂತೆ ಮೋಶೆಯು ಪ್ರತಿಯೊಂದನ್ನು ಮಾಡಿದನು. ಮೋಶೆಯು ಎರಡು ಕಲ್ಲಿನ ಹಲಿಗೆಗಳನ್ನು ಹಿಡಿದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು