ಧರ್ಮೋಪದೇಶಕಾಂಡ 10:12 - ಪರಿಶುದ್ದ ಬೈಬಲ್12 “ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.