ಧರ್ಮೋಪದೇಶಕಾಂಡ 10:13 - ಪರಿಶುದ್ದ ಬೈಬಲ್13 ಆದ್ದರಿಂದ ನಾನು ನಿಮಗೆ ಕೊಡುವ ಆತನ ಕಟ್ಟಳೆ, ವಿಧಿನಿಯಮಗಳಿಗೆ ವಿಧೇಯರಾಗಿರಿ. ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ನಿಮ್ಮ ಒಳಿತಿಗಾಗಿ ಈಗ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಬರಬೇಕು. ಇಷ್ಟನ್ನೇ ಹೊರತು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮಿಂದ ಬೇರೇನನ್ನು ಕೇಳಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವದನ್ನೇ ಹೊರತು ನಿಮ್ಮ ದೇವರಾದ ಯೆಹೋವನು ನಿವ್ಮಿುಂದ ಬೇರೇನು ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಈ ಹೊತ್ತು ನಿಮ್ಮ ಮೇಲಿಗಾಗಿ ನಿಮಗೆ ಆಜ್ಞಾಪಿಸುವ ಯೆಹೋವ ದೇವರ ಆಜ್ಞೆಗಳನ್ನೂ ಅವರ ನಿಮಯಗಳನ್ನೂ ಕಾಪಾಡುವುದೇ ಹೊರತು, ಮತ್ತೇನೂ ನಮ್ಮ ದೇವರಾಗಿರುವ ಯೆಹೋವ ದೇವರು ನಿಮ್ಮಿಂದ ಕೇಳುತ್ತಾರೆ? ಅಧ್ಯಾಯವನ್ನು ನೋಡಿ |
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.