ಧರ್ಮೋಪದೇಶಕಾಂಡ 10:17 - ಪರಿಶುದ್ದ ಬೈಬಲ್17 ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”
ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’
“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.