Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:18 - ಪರಿಶುದ್ದ ಬೈಬಲ್‌

18 ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:18
19 ತಿಳಿವುಗಳ ಹೋಲಿಕೆ  

ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.


ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.


ನಿನ್ನ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.


ಯೆಹೋವನು ನೀತಿವಂತನಾಗಿದ್ದಾನೆ. ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


“ನೀವೆಂದಿಗೂ ವಿಧವೆಯರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡುಮಾಡಬಾರದು.


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ,


ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


“ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.


ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.


ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು