Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:19 - ಪರಿಶುದ್ದ ಬೈಬಲ್‌

19 ಆದ್ದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವೂ ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗಿರುವುದರಿಂದ ನೀವು ಪರದೇಶಿಯರನ್ನು ಪ್ರೀತಿಸಿರಿ. ಏಕೆಂದರೆ ನೀವು ಈಜಿಪ್ಟಿನಲ್ಲಿ ಪರದೇಶಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:19
12 ತಿಳಿವುಗಳ ಹೋಲಿಕೆ  

“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?” ಎಂದು ಕೇಳಿದನು.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.


ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.


ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನ್ನು ಕೊಡಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು