ಧರ್ಮೋಪದೇಶಕಾಂಡ 10:2 - ಪರಿಶುದ್ದ ಬೈಬಲ್2 ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಈ ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಈ ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು. ಆಮೇಲೆ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.