ಧರ್ಮೋಪದೇಶಕಾಂಡ 10:20 - ಪರಿಶುದ್ದ ಬೈಬಲ್20 “ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.