ಧರ್ಮೋಪದೇಶಕಾಂಡ 10:4 - ಪರಿಶುದ್ದ ಬೈಬಲ್4 ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿ ಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ, ನೀವು ಸಭೆಕೂಡಿದ ದಿನದಲ್ಲಿ, ನಿಮಗೆ ಹೇಳಿದ ಮಾತುಗಳನ್ನು ಅಂದರೆ, ಆ ಹತ್ತು ಆಜ್ಞೆಗಳನ್ನು ಅವರು ಮೊದಲಿನಂತೆಯೇ ಆ ಹಲಗೆಗಳ ಮೇಲೆ ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೇಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ಹಲಗೆಗಳ ಮೇಲೆ ಯೆಹೋವ ದೇವರು ಮುಂಚೆ ಬರೆದಿದ್ದ ಪ್ರಕಾರ ಬರೆದರು. ಅವರು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿವಸದಲ್ಲಿ ಹೇಳಿದ ಆ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟರು. ಅಧ್ಯಾಯವನ್ನು ನೋಡಿ |
ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.