Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:8 - ಪರಿಶುದ್ದ ಬೈಬಲ್‌

8 ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:8
39 ತಿಳಿವುಗಳ ಹೋಲಿಕೆ  

ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.


ಯಾಕೆಂದರೆ ನಿಮ್ಮ ದೇವರಾದ ಯೆಹೋವನು ಇಸ್ರೇಲ್ ಕುಲದವರಿಂದ ಲೇವಿಕುಲದವರನ್ನು ನಿರಂತರವಾಗಿ ಆತನ ಸೇವೆಮಾಡುವುದಕ್ಕೆ ಆರಿಸಿಕೊಂಡಿರುತ್ತಾನೆ.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


“ಲೇವಿ ಕುಲದವರನ್ನು ಯಾಜಕನಾದ ಆರೋನನ ಬಳಿಗೆ ಕರೆದುಕೊಂಡು ಬಾ. ಅವರು ಆರೋನನಿಗೆ ಸಹಾಯಕರಾಗಿರುವರು.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.


ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.


ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞ ಮಾಡಿದರು.


ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.


ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.


“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.


ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!


ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ.


ಆದ್ದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳುಮಾಡಬೇಡಿ. ತನ್ನ ಸೇವೆಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.


ಆದ್ದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲಿ ಅದರ ಸಾಮಾಗ್ರಿಗಳನ್ನಾಗಲಿ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.


ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.


“ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.


ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.


ಅವನ ತಲೆಗೆ ಮುಂಡಾಸವನ್ನು ಇಟ್ಟನು; ಮುಂಡಾಸದ ಮುಂಭಾಗದಲ್ಲಿ ಚಿನ್ನದ ಪಟ್ಟಿಯನ್ನು ಕಟ್ಟಿದನು. ಈ ಚಿನ್ನದ ಪಟ್ಟಿಯು ಪವಿತ್ರಕಿರೀಟವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


“ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು


ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು