Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:1 - ಪರಿಶುದ್ದ ಬೈಬಲ್‌

1 “ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಿಮ್ಮ ದೇವರಾದ ಯೆಹೋವನಲ್ಲಿ ಪ್ರೀತಿಯಿಟ್ಟು ಆತನ ನಿಯಮಗಳನ್ನು ಕೈಕೊಂಡು ಆತನ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:1
22 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.


ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”


ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ.


ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.


“ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”


“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


“ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ


“ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ.


ನಾನೇ ನಿಮ್ಮ ದೇವರಾದ ಯೆಹೋವನು. ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಿ, ನನ್ನ ಆಜ್ಞೆಗಳನ್ನು ಅನುಸರಿಸಿರಿ. ನಾನು ಹೇಳಿದವುಗಳನ್ನು ಮಾಡಿರಿ.


ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.


ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು