ಧರ್ಮೋಪದೇಶಕಾಂಡ 11:14 - ಪರಿಶುದ್ದ ಬೈಬಲ್14 ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮಗೆ ಗೋದಿ, ದ್ರಾಕ್ಷೆ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂವಿುಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಸರಿಯಾಗಿ ನಡಿಸುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು. ಅಧ್ಯಾಯವನ್ನು ನೋಡಿ |