ಧರ್ಮೋಪದೇಶಕಾಂಡ 11:17 - ಪರಿಶುದ್ದ ಬೈಬಲ್17 ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂವಿುಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ. ಅಧ್ಯಾಯವನ್ನು ನೋಡಿ |
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.