ಧರ್ಮೋಪದೇಶಕಾಂಡ 11:18 - ಪರಿಶುದ್ದ ಬೈಬಲ್18 “ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹುಬ್ಬುಗಳ ನಡುವೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ. ಅಧ್ಯಾಯವನ್ನು ನೋಡಿ |