Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:19 - ಪರಿಶುದ್ದ ಬೈಬಲ್‌

19 ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:19
12 ತಿಳಿವುಗಳ ಹೋಲಿಕೆ  

ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.


ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.


ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.


ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.


ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು