ಧರ್ಮೋಪದೇಶಕಾಂಡ 11:22 - ಪರಿಶುದ್ದ ಬೈಬಲ್22 “ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ, ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.