Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:7 - ಪರಿಶುದ್ದ ಬೈಬಲ್‌

7 ಆತನು ಮಾಡಿದ ಎಲ್ಲಾ ಮಹಾಕೃತ್ಯಗಳನ್ನು ನೋಡಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ನಡೆಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನಡಿಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:7
12 ತಿಳಿವುಗಳ ಹೋಲಿಕೆ  

ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ!


ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.


ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.


ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು.


ಯೆಹೋವನು ನಮ್ಮ ಪೂರ್ವಿಕರೊಂದಿಗೆ ಒಡಂಬಡಿಕೆ ಮಾಡದೆ ಈಗ ಇಲ್ಲಿ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ.


ರೂಬೇನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣಮುಂದೆಯೇ ಭೂಮಿಯು ಬಾಯಿ ತೆರೆದು ಅವರನ್ನು, ಅವರ ಹೆಂಡತಿಮಕ್ಕಳನ್ನು, ಅವರ ಗುಡಾರವನ್ನು, ಸೇವಕರನ್ನು, ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ.


“ಆದ್ದರಿಂದ ನಾನು ನಿಮಗೆ ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ.


“ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.


ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.


ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡಿಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು