Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:9 - ಪರಿಶುದ್ದ ಬೈಬಲ್‌

9 ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:9
19 ತಿಳಿವುಗಳ ಹೋಲಿಕೆ  

ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೆ ಬಹುಕಾಲ ಬದುಕುವಿರಿ. ಆದರೆ ಕೆಡುಕರು ತಮ್ಮ ಜೀವಮಾನದ ವರ್ಷಗಳನ್ನು ಕಳೆದುಕೊಳ್ಳುವರು.


ನೀನು ಜ್ಞಾನಿಯಾಗಿದ್ದರೆ, ಬಹುಕಾಲ ಬದುಕುವೆ.


ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು.


ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.


ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.


“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು.


ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು