ಧರ್ಮೋಪದೇಶಕಾಂಡ 12:1 - ಪರಿಶುದ್ದ ಬೈಬಲ್1 “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನೀವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದಲ್ಲಿ ನೀವು ಬದುಕುವ ದಿವಸಗಳಲ್ಲೆಲ್ಲಾ ಕೈಗೊಂಡು ನಡೆಯತಕ್ಕ ತೀರ್ಪು ಹಾಗು ನಿಯಮಗಳು ಇವೇ. ಅಧ್ಯಾಯವನ್ನು ನೋಡಿ |