Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:12 - ಪರಿಶುದ್ದ ಬೈಬಲ್‌

12 ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:12
30 ತಿಳಿವುಗಳ ಹೋಲಿಕೆ  

ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


“ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.


ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ತ್ಯವು ದೊರಕಲಿಲ್ಲ. ಅವರ ಸ್ವಾಸ್ತ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.)


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ.


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.


ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.


ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.


ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.


ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ತ್ಯವಾಗಿದ್ದನು.


ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.


ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.


“ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.


“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.


ಈ ಕಾರ್ಯದಲ್ಲಿ ನೀನು ನಮ್ಮೊಂದಿಗೆ ಭಾಗಿಯಾಗಲು ಸಾಧ್ಯವಿಲ್ಲ. ನಿನ್ನ ಹೃದಯವು ದೇವರ ಮುಂದೆ ಸರಿಯಾಗಿಲ್ಲ.


ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.


ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣುಗಳನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು.


ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು