ಧರ್ಮೋಪದೇಶಕಾಂಡ 12:14 - ಪರಿಶುದ್ದ ಬೈಬಲ್14 ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು. ಅಧ್ಯಾಯವನ್ನು ನೋಡಿ |
ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.
“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.