Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:15 - ಪರಿಶುದ್ದ ಬೈಬಲ್‌

15 “ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟುಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ನೀವು ಎಲ್ಲ ಊರುಗಳಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಅಭಿವೃದ್ಧಿಪಡಿಸುವ ಮೇರೆಗೆ ಪಶುಪ್ರಾಣಿಗಳನ್ನು ಇಷ್ಟಾನುಸಾರ ಕೊಯ್ದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿಮ್ಮ ಇಷ್ಟಾನುಸಾರ ಮಾಂಸಾಹಾರವನ್ನು ನಿಮ್ಮ ಎಲ್ಲಾ ಊರುಗಳಲ್ಲಿ ತಿನ್ನಬಹುದು. ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:15
6 ತಿಳಿವುಗಳ ಹೋಲಿಕೆ  

ಜಿಂಕೆ, ದುಪ್ಪಿ, ಸಾರಂಗ, ಕಾಡುಕುರಿ, ಕಾಡುಮೇಕೆ, ಕಡವೆ, ಬೆಟ್ಟದ ಆಡು ಇವುಗಳನ್ನು ತಿನ್ನಬಹುದು.


ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.


ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು