ಧರ್ಮೋಪದೇಶಕಾಂಡ 12:17 - ಪರಿಶುದ್ದ ಬೈಬಲ್17 “ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ. ಅಧ್ಯಾಯವನ್ನು ನೋಡಿ |
ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.