Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:2 - ಪರಿಶುದ್ದ ಬೈಬಲ್‌

2 ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರಗಳ ಕೆಳಗೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:2
22 ತಿಳಿವುಗಳ ಹೋಲಿಕೆ  

“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.


ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.


ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.


ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


“ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು