Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:20 - ಪರಿಶುದ್ದ ಬೈಬಲ್‌

20-21 “ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವದಕ್ಕೆ ಇಷ್ಟಪಟ್ಟರೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:20
24 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


“ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.


ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.


“ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟುಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.


ಇದಲ್ಲದೆ ಆ ಜನರು ಪ್ರಾರ್ಥಿಸುವಾಗ ತಾವು ನಿಮ್ಮೊಂದಿಗೆ ಇರಬೇಕಾಗಿತ್ತೆಂದು ಆಶಿಸುವರು. ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿರುವುದೇ ಅದಕ್ಕೆ ಕಾರಣ.


ನಿನ್ನಲ್ಲಿ ರಕ್ಷಣೆಗಾಗಿ ಪ್ರಾರ್ಥಿಸುವೆ. ನಿನ್ನ ಉಪದೇಶಗಳು ನನ್ನನ್ನು ಸಂತೋಷಗೊಳಿಸುತ್ತವೆ.


ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.


ನಿನ್ನ ನಿರ್ಧಾರಗಳನ್ನು ತಿಳಿದುಕೊಳ್ಳಲು ಯಾವಾಗಲೂ ನಾನು ಹಂಬಲಿಸುತ್ತಿದ್ದೇನೆ.


ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು, “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು.


ಅಮ್ನೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಷಾಲೋಮನನ್ನು ಕಾಣಲು ಬಹಳವಾಗಿ ಹಾತೊರೆಯತೊಡಗಿದನು.


ಈ ಕಾರಣದಿಂದ ಆ ಸ್ಥಳಕ್ಕೆ, “ಕಿಬ್ರೋತ್ ಹತಾವಾ” ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು.


ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”


ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?


ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು.


ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು