Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:23 - ಪರಿಶುದ್ದ ಬೈಬಲ್‌

23 ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ರಕ್ತವು ಜೀವಾಧಾರವಾದದರಿಂದ ಮಾಂಸದೊಡನೆ ರಕ್ತವನ್ನು ಭುಜಸಲೇ ಕೂಡದೆಂಬದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:23
17 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.


ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು.


ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


“ನೀವು ಎಲ್ಲಿಯೇ ವಾಸಿಸಿದರೂ, ಯಾವುದೇ ಪಕ್ಷಿಯ ಅಥವಾ ಯಾವುದೇ ಪ್ರಾಣಿಯ ರಕ್ತವನ್ನು ನೀವು ಎಂದಿಗೂ ತಿನ್ನಬಾರದು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


“ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು.


ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು.


ರಕ್ತವನ್ನು ನೀರಿನಂತೆ ನೆಲದಲ್ಲಿ ಚೆಲ್ಲಿಬಿಡಬೇಕು.


ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು.


ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು. ಅದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಲನ್ನು ಇಲ್ಲಿಗೆ ಉರುಳಿಸಿದ ನಂತರ


“ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು