Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:26 - ಪರಿಶುದ್ದ ಬೈಬಲ್‌

26 “ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಆದರೆ ನಿಮ್ಮ ಬಳಿಯಿರುವ ದೇವರ ವಸ್ತುಗಳನ್ನು ಹಾಗು ಹರಕೆಮಾಡಿದ್ದನ್ನೂ ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆದುಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:26
10 ತಿಳಿವುಗಳ ಹೋಲಿಕೆ  

ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನುಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು