ಧರ್ಮೋಪದೇಶಕಾಂಡ 12:27 - ಪರಿಶುದ್ದ ಬೈಬಲ್27 ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದಹನಬಲಿಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದಲ್ಲಿ ದಹಿಸಿಬಿಡಬೇಕು. ಮಿಕ್ಕಬಲಿಗಳನ್ನು ಅರ್ಪಿಸುವಾಗ ರಕ್ತವನ್ನು ಸರ್ವೇಶ್ವರನ ಬಲಿಪೀಠದ ಮೇಲೆ ಸುರಿದುಬಿಟ್ಟು, ಮಾಂಸವನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸರ್ವಾಂಗಹೋಮಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ನಿಮ್ಮ ದಹನಬಲಿಗಳನ್ನೂ, ರಕ್ತಮಾಂಸವನ್ನೂ, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸಬೇಕು. ನಿಮ್ಮ ಬಲಿಗಳ ರಕ್ತವನ್ನು ನಿನ್ನ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಸುರಿಯಬೇಕು. ಅನಂತರ ಮಾಂಸ ಊಟಮಾಡಬಹುದು. ಅಧ್ಯಾಯವನ್ನು ನೋಡಿ |