ಧರ್ಮೋಪದೇಶಕಾಂಡ 12:3 - ಪರಿಶುದ್ದ ಬೈಬಲ್3 ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.