Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:31 - ಪರಿಶುದ್ದ ಬೈಬಲ್‌

31 ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:31
24 ತಿಳಿವುಗಳ ಹೋಲಿಕೆ  

“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಮನಸ್ಸೆಯು ಮಾಡಿದನು.


“ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’”


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.


ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!


ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.


ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.


ದೇವಜನರು ತಮ್ಮ ಸ್ವಂತ ಮಕ್ಕಳನ್ನೂ ಆ ದೆವ್ವಗಳಿಗೆ ಬಲಿಕೊಟ್ಟರು.


ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.


ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು