Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:32 - ಪರಿಶುದ್ದ ಬೈಬಲ್‌

32 “ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:32
9 ತಿಳಿವುಗಳ ಹೋಲಿಕೆ  

ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು.


ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಧಿನಿಯಮಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರಸ್ಥಳದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು.


ಈ ಹೊತ್ತು ನಾನು ನಿಮಗೆ ಕೊಡುವ ಆಜ್ಞೆಗಳಿಗೆ ನೀವು ವಿಧೇಯರಾದರೆ ಮಾತ್ರ ನಿಮ್ಮ ದೇಶವನ್ನು ಆತನು ವಿಸ್ತರಿಸುವನು. ನೀವು ನಿಮ್ಮ ದೇವರಾದ ಯೆಹೋವನನ್ನು ಯಾವಾಗಲೂ ಪ್ರೀತಿಸಬೇಕು. ದೇವರು ನಿಮ್ಮ ದೇಶದ ಮೇರೆಯನ್ನು ವಿಸ್ತರಿಸಿದಾಗ ನೀವು ಇನ್ನೂ ಮೂರು ಆಶ್ರಯ ನಗರಗಳನ್ನು ಆರಿಸಿಕೊಳ್ಳಬೇಕು.


ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು