ಧರ್ಮೋಪದೇಶಕಾಂಡ 12:4 - ಪರಿಶುದ್ದ ಬೈಬಲ್4 “ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಆರಾಧಿಸಬಾರದು. ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.