ಧರ್ಮೋಪದೇಶಕಾಂಡ 12:5 - ಪರಿಶುದ್ದ ಬೈಬಲ್5 ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು. ಅಧ್ಯಾಯವನ್ನು ನೋಡಿ |
‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.
ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.
ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.
“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.