ಧರ್ಮೋಪದೇಶಕಾಂಡ 12:6 - ಪರಿಶುದ್ದ ಬೈಬಲ್6 ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು. ಅಧ್ಯಾಯವನ್ನು ನೋಡಿ |
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”
ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.