7 ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.
7 ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.
ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣುಗಳನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು.
ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.
ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.
ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.
ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.
ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಆ ಲಾಭವನ್ನು ಮೀಸಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆತುಂಬ ಊಟಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.
ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.
ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು.
ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.
ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”
ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”