Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:8 - ಪರಿಶುದ್ದ ಬೈಬಲ್‌

8-9 “ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಈಗ ಈ ಸ್ಥಳದಲ್ಲಿ ನಡೆಯುವಂತೆ ಎಲ್ಲರೂ ತಮ್ಮತಮ್ಮ ಮನಸ್ಸಿಗೆ ತೋರಿದಂತೆ ನಡೆಯಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:8
10 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು.


(ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿದಂತೆ ನಡೆದುಕೊಳ್ಳುತ್ತಿದ್ದರು.)


ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.


ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ಆಗ ಯೆಹೋಶುವನು ಇಸ್ರೇಲರಿಗೆ, “ಇಲ್ಲಿ ಬನ್ನಿರಿ; ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು