ಧರ್ಮೋಪದೇಶಕಾಂಡ 13:1 - ಪರಿಶುದ್ದ ಬೈಬಲ್1 “ಒಬ್ಬ ಪ್ರವಾದಿಯಾಗಲಿ ಕನಸಿನ ಅರ್ಥ ಹೇಳುವವನಾಗಲಿ ನಿಮ್ಮ ಬಳಿಗೆ ಬಂದು ನಿಮಗೊಂದು ಸೂಚಕಕಾರ್ಯವನ್ನಾಗಲಿ ಅದ್ಭುತಕಾರ್ಯವನ್ನಾಗಲಿ ಮಾಡಿತೋರಿಸುತ್ತೇನೆ ಎಂದು ಹೇಳಿದರೂ ಹೇಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನಿಮ್ಮ ಮಧ್ಯೆ ಯಾವ ಪ್ರವಾದಿಯೆ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾವ ಪ್ರವಾದಿಯಾಗಲಿ ಕನಸುಕಂಡವನಾಗಲಿ ನಿಮ್ಮ ಮಧ್ಯದಲ್ಲಿ ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮ ಮಧ್ಯೆ ಯಾವ ಪ್ರವಾದಿಯೇ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆ ಮಾಡಿ, ಅಧ್ಯಾಯವನ್ನು ನೋಡಿ |
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.