16 ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು.
16 ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
16 ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.
16 ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
16 ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.
ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:
ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.
ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.
ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.
ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.
ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.
“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.
ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.
ನಾನು ನಿನ್ನನ್ನು ಬರಿದಾದ ಬಂಡೆಯನ್ನಾಗಿ ಮಾಡುವೆನು. ಸಮುದ್ರದ ತೀರದಲ್ಲಿ ಬಲೆಗಳನ್ನು ಹರಡುವ ಸ್ಥಳವಾಗಿ ನೀನು ಮಾರ್ಪಡುವೆ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನ್ನ ಒಡೆಯನಾದ ಯೆಹೋವನು ಇದನ್ನು ನನಗೆ ತಿಳಿಸಿದನು.