ಧರ್ಮೋಪದೇಶಕಾಂಡ 13:18 - ಪರಿಶುದ್ದ ಬೈಬಲ್18 ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವು ಹೀಗೆ ನಡೆದು, ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಅವರ ಎಲ್ಲ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ, ಅವರು ರೋಷಾಗ್ನಿಯನ್ನು ತಡೆದು, ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸುವರು; ತಾವು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಅಭಿವೃದ್ಧಿಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು. ಅಧ್ಯಾಯವನ್ನು ನೋಡಿ |