ಧರ್ಮೋಪದೇಶಕಾಂಡ 13:2 - ಪರಿಶುದ್ದ ಬೈಬಲ್2 ಅವನು ಅದ್ಭುತಕಾರ್ಯಗಳನ್ನು ಮಾಡಿತೋರಿಸಬಹುದು. ಆಮೇಲೆ ಅವನು ನಿಮಗೆ ಗೊತ್ತಿಲ್ಲದ ದೇವರನ್ನು ಅನುಸರಿಸಲು ನಿಮಗೆ ಹೇಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈ ದೇವತೆಗಳನ್ನು ಅವಲಂಬಿಸಿ ಸೇವಿಸೋಣ ಎಂದು ಬೋಧಿಸುತ್ತಾ ಆ ಬೋಧನೆಯನ್ನು ಸ್ಥಾಪಿಸುವದಕ್ಕೆ ಒಂದು ಅದ್ಭುತವನ್ನಾಗಲಿ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಲು ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ,” ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು. ಅಧ್ಯಾಯವನ್ನು ನೋಡಿ |
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.