3 ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.
3 ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
3 ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.
3 ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.
ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.
ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.
ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.
ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.
ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.
ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.
ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.
ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”
ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.
ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.