ಧರ್ಮೋಪದೇಶಕಾಂಡ 13:4 - ಪರಿಶುದ್ದ ಬೈಬಲ್4 ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ ಆತನ ಆಜ್ಞೆಗಳನ್ನೇ ಅನುಸರಿಸಿ ಆತನಿಗೇ ವಿಧೇಯರಾಗಿ ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.