7 ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಅಂತರಂಗದಲ್ಲಿ ನಿಮಗೆ ಬೋಧಿಸಿದರೆ ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ ದೂರವಾದವರ ದೇವರುಗಳಾದರೂ ಭೂಲೋಕದ ಯಾವ ಭಾಗದವರ ದೇವರುಗಳಾದರೂ ನೀವು ಸಮ್ಮತಿಸಲೂಬಾರದು ಕಿವಿಗೊಡಲೂಬಾರದು.
7 ನಿಮಗೆ ಸಮೀಪವಾಗಲಿ, ನಿಮಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯವರೆಗೆ ನಿಮ್ಮ ಸುತ್ತಲಿರುವ ಜನರ ದೇವರುಗಳನ್ನು ಸೇವಿಸೋಣ,” ಎಂದು ನಿಮ್ಮನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ,
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು: