ಧರ್ಮೋಪದೇಶಕಾಂಡ 14:1 - ಪರಿಶುದ್ದ ಬೈಬಲ್1 “ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.