ಧರ್ಮೋಪದೇಶಕಾಂಡ 14:21 - ಪರಿಶುದ್ದ ಬೈಬಲ್21 “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು. ಅಧ್ಯಾಯವನ್ನು ನೋಡಿ |